ಮಹಾಲಕ್ಷ್ಮೀಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೃಷ್ಣಾನಂದನಗರ ಕರ್ನಾಟಕ ಪಬ್ಲಿಕ್ ಶಾಲೆ, ವೃಷಭಾವತಿನಗರದ ಶ್ರೀ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ, ಕುರುಬರಹಳ್ಳಿಯಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಶ್ರೀ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಸ್ಕೂಲ್ ಬ್ಯಾಗ್ ಹಾಗೂ ಶೂ ಗಳನ್ನು ಇಲ್ಲಿನ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಕೆ, ಗೋಪಾಲಯ್ಯರವರು ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಉಪಮಹಾಪೌರರಾದ ಶ್ರೀಮತಿ ಹೇಮಲತಾ ಗೋಪಾಲಯ್ಯ, ಮಾಜಿ ಪಾಲಿಕೆ ಸದಸ್ಯರಾದ ಶ್ರೀ ಮಹಾದೇವ್, ಶ್ರೀಮತಿ ಲಕ್ಷ್ಮೀ ಚಿಕ್ಕೇಗೌಡ, ಶ್ರೀ ಜಯರಾಂ.ಎನ್, ಡಾ|| ನಾಗೇಂದ್ರ ಮತ್ತು ಇತರೆ ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.
ಶಾಸಕ ಕೆ.ಗೋಪಾಲಯ್ಯ ಅವರಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ, ಸ್ಕೂಲ್ ಬ್ಯಾಗ್ ಹಾಗೂ ಶೂ ವಿತರಣೆ
RELATED ARTICLES