ಗೌರಿಬಿದನೂರು: ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳ ಮತ್ತು ಸಿಬ್ಬಂದಿಗಳ ಹಾಜರಾತಿ, ಅಂಗನವಾಡಿ ಉಗ್ರಾಣ ಕೋಣೆ, ದಾಸ್ತಾನು ವಿವರ ಪಡೆದುಕೊಂಡ ಅವರು, 15 ದಿನಗಳಿಗೊಮ್ಮೆ ಕಡ್ಡಾಯವಾಗಿ ದಾಸ್ತಾನು ಸರಬರಾಜಾಗಬೇಕು. ಮಕ್ಕಳಿಗೆ ನೀಡುವ ಆಹಾರ ಧಾನ್ಯಗಳಲ್ಲಿ ಯಾವುದೇ ಕಾರಣಕ್ಕೂ ಲೋಪವಾಗಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗೌರಿಬಿದನೂರು ತಾಲ್ಲೂಕಿನ ತೊಂಡೇಭಾವಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕಾಮಾಲಪುರ ಗ್ರಾಮದಲ್ಲಿ ನರೇಗಾ ಯೋಜನೆಯಲ್ಲಿ ನಿರ್ಮಾಣವಾಗಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಪ್ರತಿದಿನ ಮಕ್ಕಳಿಗೆ ಯಾವರೀತಿ ಆಹಾರ ಧಾನ್ಯಗಳನ್ನು ನೀಡಲಾಗುತ್ತದೆ. ಅದೇ ರೀತಿಯಾಗಿ ಎಷ್ಟು ಜನ ಮಕ್ಕಳಿದ್ದಾರೆ ಮತ್ತು ಮೊಟ್ಟೆ ಸೇರಿದಂತೆ ಇತರೆ ಧಾನ್ಯಗಳ ಉತ್ತಮ ಗುಣಮಟ್ಟವನ್ನು ಹೊಂದಿದ್ದಾರೆಯೇ ಎಂಬುವುದರ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯನ್ನು ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಾದ ಪ್ರಕಾಶ್ ಜಿ ಟಿ ನಿಟ್ಟಾಲಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್.ಆರ್, ನರೇಗಾ ಸಹಾಯಕ ನಿರ್ದೇಶಕರವರಾದ ಕರಿಯಪ್ಪ, ಜಿಲ್ಲಾ ಪಂಚಾಯತ್ ADPC ಹರೀಶ್, ತೊಂಡೇಬಾವಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರಾದ ಬಸವರಾಜು, ನರೇಗಾ TC ಸುಜಯ್, ಇಂಜಿನಿಯರ್ ಪ್ರಶಾಂತ್, ಗ್ರಾಮ ಪಂಚಾಯಿತಿ ಹಾಗೂ ಅಂಗನವಾಡಿ ಸಿಬ್ಬಂದಿ ಸೇರಿದಂತೆ ಇತರರು ಹಾಜರಿದ್ದರು.