
ನಟ ವಿಜಯರಾಘವೇಂದ್ರ ,ಪತ್ನಿ ಸ್ಪಂದನಾ
ಬೆಂಗಳೂರು: ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ. ಬ್ಯಾಂಕಾಕ್ ತೆರಳಿದ್ದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದ್ದು ಅಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ADVERTISEMENT
ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ ಶಿವರಾಂ ಅವರ ಪುತ್ರಿಯಾದ ಸ್ಪಂದನಾ ಅವರು 2007ರಲ್ಲಿ ನಟ ವಿಜಯರಾಘವೇಂದ್ರ ಅವರನ್ನು ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಒಬ್ಬ ಮಗ ಇದ್ದಾನೆ.
ಸ್ಪಂದನಾ ಅವರು ತಮ್ಮ ಸೋದರ ಸಂಬಂಧಿಗಳ ಜೊತೆ ಪ್ರವಾಸಕ್ಕೆ ತೆರಳಿದ್ದರು. ವಿಜಯ್ ರಾಘವೇಂದ್ರ ಅವರು ಚಿತ್ರೀಕರಣ ಪೂರ್ಣಗೊಳಿಸಿಕೊಂಡು ಅವರನ್ನು ಸೇರಿದ್ದರು. ಹೀಗೆ ಅವರೆಲ್ಲರ ಜೊತೆ ಸಮಯ ಕಳೆದು ಮಲಗಿದ್ದವರು ಅಲ್ಲೇ ನಿಧನರಾಗಿದ್ದಾರೆ. ಕಡಿಮೆ ರಕ್ತದೊತ್ತಡದಿಂದ ಈ ಘಟನೆಯಾಗಿದೆ ಎಂದು ಭಾವಿಸಿದ್ದೇವೆ. ಬಂದ ಬಳಿಕ ಹೆಚ್ಚಿನ ವಿವರ ಸಿಗಲಿದೆ. ನಾಳೆ ಮೃತದೇಹ ಬೆಂಗಳೂರಿಗೆ ಬರಲಿದೆ ಎಂದಿದ್ದಾರೆ ನಟ ಶ್ರೀಮುರಳಿ.
ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು.
– ಮುಖ್ಯಮಂತ್ರಿ