ಬೆಂಗಳೂರು ಗ್ರಾಮಾಂತರ ಜಿಲ್ಲೆ/ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್ 20 ರಂದು ಬೆಳಗ್ಗೆ 10.00 ಗಂಟೆಗೆ ದೇವನಹಳ್ಳಿ ಟೌನ್ ನ ತಾಲ್ಲೂಕು ಆಡಳಿತ ಸೌಧದ ಹಿಂಭಾಗ ಇರುವ ಡಿ.ದೇವರಾಜು ಅರಸು ಭವನದಲ್ಲಿ ಡಿ.ದೇವರಾಜು ಅರಸುರವರ 108ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟನೆ ಮಾಡಲಿದ್ದಾರೆ.
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ಎಸ್ ತಂಗಡಗಿ, ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಶಾಸಕರಾದ ಎಸ್.ರವಿ, ಎನ್.ನಾಗರಾಜು, ಅ.ದೇವೇಗೌಡ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್,
ನೆಲಮಂಗಲ ವಿಧಾನಸಭಾ
ಕ್ಷೇತ್ರದ ಶಾಸಕರಾದ ಶ್ರೀನಿವಾಸಯ್ಯ.ಎನ್, ಪಶುಸಂಗೋಪನೆ, ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿಯ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ.ಫಾಹಿಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ತುಳಸಿ ಮದ್ದಿನೇನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ನಿರುಪಮ.ಸಿ.ಮೌಳಿ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು ಎಲ್ಲಾ ನಾಮನಿರ್ದೇಶಿತ ಸದಸ್ಯರು ಎಲ್ಲಾ ಸಮುದಾಯದ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.