Thursday, November 30, 2023
Homeಇದೀಗ ಬಂದ ತಾಜಾ ಸುದ್ದಿಸಮಾಜದಲ್ಲಿ ಅಪರಾಧಗಳನ್ನು ತಡೆಗಟ್ಟುವಲ್ಲಿ ಧ್ಯಾನದ ಪಾತ್ರ

ಸಮಾಜದಲ್ಲಿ ಅಪರಾಧಗಳನ್ನು ತಡೆಗಟ್ಟುವಲ್ಲಿ ಧ್ಯಾನದ ಪಾತ್ರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ನೆಲಮಂಗಲ, ತಾಲೂಕು ಕಾನೂನು ಸೇವೆಗಳ ಸಮಿತಿ, ಜಿಲ್ಲಾಡಳಿತ, ದೆಹಲಿಯ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ, ಕರ್ನಾಟಕ ಪಬ್ಲಿಕ್ ಸ್ಕೂಲ್ ತ್ಯಾಮಗೊಂಡ್ಲು, ಹಾರ್ಟ್ ಫುಲ್ನೆಸ್ ಸಂಘಟನೆ ಸಹಯೋಗದಲ್ಲಿ ಸಮಾಜದಲ್ಲಿ ಅಪರಾಧಗಳನ್ನು ತಡೆಗಟ್ಟುವಲ್ಲಿ ಧ್ಯಾನದ ಪಾತ್ರ ಎಂಬ ಕಾರ್ಯಕ್ರಮವನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ತ್ಯಾಮಗೊಂಡ್ಲು ನಲ್ಲಿ ಏರ್ಪಡಿಸಲಾಗಿತ್ತು.
ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಜಿಲ್ಲಾ ಕೆರೆ ಸಂರಕ್ಷಣಾ ಸಮಿತಿ ಕಾರ್ಯದರ್ಶಿ ಸಂದೀಪ್ ಸಾಲಿಯಾನ್ ಅವರು ಉದ್ಘಾಟಿಸಿದರು.
ಪಾಟೀಲ್ ಗೋವಿಂದ ರೆಡ್ಡಿ ಪ್ರಾಂಶುಪಾಲರು ಕರ್ನಾಟಕ ಪಬ್ಲಿಕ್ ಸ್ಕೂಲ್ ತ್ಯಾಮಗೊಂಡ್ಲು, ಆರ್.ದಯಾನಂದ ಸ್ವಾಮಿ
ಅಧ್ಯಕ್ಷರು ವಕೀಲರ ಸಂಘ ನೆಲಮಂಗಲ, ಕೆ.ಎನ್ ಸುರೇಶ್‌ ಗೌರವ ಅಧ್ಯಕ್ಷರು ವಕೀಲರ ಸಂಘ ನೆಲಮಂಗಲ, ಎನ್.ಮಂಜುನಾಥ್‌ ಉಪಪ್ರಾಂಶುಪಾಲರು ಕರ್ನಾಟಕ ಪಬ್ಲಿಕ್ ಸ್ಕೂಲ್ ತ್ಯಾಮಗೊಂಡ್ಲು, ಕೆ.ಪಿ ರಾಜನ್ ತಿಮ್ಮಯ್ಯ ಪ್ರಧಾನ ಕಾರ್ಯದರ್ಶಿ ಕಾರ್ಮಿಕ ವಿಭಾಗ, ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ದೆಹಲಿ, ಡಿ.ರವಿಕುಮಾರ
ಅಧ್ಯಕ್ಷರು ಮಾನವ ಹಕ್ಕುಗಳ ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆ ದೆಹಲಿ ನೆಲಮಂಗಲ ಶಾಖೆ, ಜಗದೀಶ.ಆರ್ ಹಾರ್ಟ್ ಪುಲ್ ನೆಸ್ ಟ್ರೈನರ್, ಹಾರ್ಟ್ ಪುಲ್ ನೆಸ್ ಸಂಘಟನೆ ಬೆಂಗಳೂರು, ಗ್ರಾಮಾಂತರ ಜಿಲ್ಲೆ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್, ಜಿಲ್ಲಾ ಬಾಲಾ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕರು ಸುಬ್ಬರಾವ್ ಸೇರಿದಂತೆ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments