ಕೇಂದ್ರ ಪ್ರವಾಸೋದ್ಯಮ ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀ ಅಜಯ್ ಭಟ್ ಅವರು ಬೆಂಗಳೂರಿನಲ್ಲಿ “ಕರ್ನಾಟಕದ ಪ್ರವಾಸೋದ್ಯಮ ಪಾಲುದಾರರನ್ನು” ಭೇಟಿಯಾದರು .
ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರದ ಯೋಜನೆಗಳನ್ನು ಉತ್ತಮವಾಗಿ ಬಳಸಿಕೊಳ್ಳುವಂತೆ ಪ್ರವಾಸೋದ್ಯಮ ಪಾಲುದಾರರಿಗೆ ಸಚಿವರು ಕೇಳಿಕೊಂಡರು.
ಕೇಂದ್ರ ಪ್ರವಾಸೋದ್ಯಮ ಮತ್ತು ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀ ಅಜಯ್ ಭಟ್ ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕದ ಪ್ರವಾಸೋದ್ಯಮ ಪಾಲುದಾರರೊಂದಿಗೆ ಸಭೆ ನಡೆಸಿದರು. ಮಧ್ಯಸ್ಥಗಾರರನ್ನುದ್ದೇಶಿಸಿ ಮಾತನಾಡಿದ ಸಚಿವರು, ಪ್ರವಾಸೋದ್ಯಮ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಒದಗಿಸಿರುವ ಸೌಲಭ್ಯಗಳು ಮತ್ತು ಯೋಜನೆಗಳನ್ನು ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಳಸಿಕೊಳ್ಳಬೇಕು ಎಂದರು. ರಾಜ್ಯದ ಕಡಿಮೆ ಪರಿಚಿತ ಐತಿಹಾಸಿಕ ಸ್ಥಳಗಳನ್ನು ಗುರುತಿಸಿ ಜನಪ್ರಿಯಗೊಳಿಸುವಂತೆ ಮತ್ತು ಪ್ರವಾಸಿಗರಿಗೆ ಈ ಸ್ಥಳಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಒದಗಿಸುವಂತೆ ಅವರು ಸಂಬಂಧಪಟ್ಟವರಿಗೆ ಕರೆ ನೀಡಿದರು . ಶ್ರೀ ಅಜಯ್ ಭಟ್ ಅವರು ದೇಶದಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಉತ್ತೇಜಿಸಲು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಎತ್ತಿ ತೋರಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿನಿಧಿಗಳು, ಟ್ರಾವೆಲ್ ಟ್ರೇಡ್ ಪಾಲುದಾರರು, ಹೋಟೆಲ್ ಮಾಲೀಕರು, ಮಾರ್ಗದರ್ಶಿಗಳು ಮತ್ತು ಯೋಜನಾ ನಿರ್ವಹಣಾ ತಂಡದ ಪ್ರತಿನಿಧಿಗಳು ಭಾಗವಹಿಸಿದ್ದರು. ಸಂವಾದದ ಸಮಯದಲ್ಲಿ, ಪ್ರತಿನಿಧಿಗಳು ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಮಂಡಿಸಿದರು ಮತ್ತು ಪ್ರವಾಸೋದ್ಯಮ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳನ್ನು ಉಲ್ಲೇಖಿಸಿದರು .