ಹಿರಿಯ ಪತ್ರಕರ್ತ, ವಿಜಯಪುರ ವಿಜಯವಾಣಿ ವರದಿಗಾರ ಶರಣು ಪಾಟೀಲ (ಯಂಕಂಚಿ) ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಕನ್ನಡಮ್ಮ, ಈಟಿವಿ ಭಾರತ್ ಸೇರಿದಂತೆ ಹಲವಾರು ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡಿದ್ದ ಶರಣು, ಇಷ್ಟು ಬೇಗ ಮೃತಪಟ್ಟಿದ್ದು ನೋವಿನ ಸಂಗತಿ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ.
ಶರಣು ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.