ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿ

Kalabandhu Editor
0 Min Read

ಮುಂಬರುವ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ಸಭಾಂಗಣದಲ್ಲಿ ಸೆಕ್ಟರ್ ಅಧಿಕಾರಿಗಳಿಗೆ, ಫ್ಲೈಯಿಂಗ್ ಸ್ಕ್ವಾಡ್ ತಂಡದ ಅಧಿಕಾರಿಗಳಿಗೆ, ವಿಡಿಯೋ ವೀವಿಂಗ್ ತಂಡದ ಅಧಿಕಾರಿಗಳಿಗೆ, ಇ.ವಿ‌.ಎಂ ತಂಡದ ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿಯನ್ನು ನೀಡಲಾಯಿತು. ತರಬೇತಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಚುನಾವಣೆ ಸಂದರ್ಭದಲ್ಲಿ ನಿರ್ವಹಿಸುವ ಕರ್ತವ್ಯಗಳನ್ನು ಕುಲಂಕುಶವಾಗಿ ವಿವರಿಸಲಾಯಿತು.
ತರಬೇತಿಯಲ್ಲಿ ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ತರಬೇತುದಾರ ಅಮಿರ್ ಪಾಷಾ ಸೇರಿದಂತೆ ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು. ಕೊನೆಯಲ್ಲಿ ಮತಯಂತ್ರ ಪ್ರಾತ್ಯಕ್ಷಿಕೆ ಪ್ರದರ್ಶಿಸಲಾಯಿತು.

Share this Article