ಬೆಂಗಳೂರು ಗ್ರಾಮಾಂತರ ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ-ಡಿಸ್ಟ್ರಿಕ್ ಮಿಷನ್ ಕೊ- ಆರ್ಡಿನೇಟರ್, ಹುದ್ದೆ- ಸಂಖ್ಯೆ 01,
ವಿದ್ಯಾರ್ಹತೆ: ಸಮಾಜ ವಿಜ್ಞಾನ, ಲೈಪ್ ಸೈನ್ಸ್, ನ್ಯೂಟ್ರಿಷನ್, ಮೆಡಿಸನ್, ಹೆಲ್ತ್ ಮ್ಯಾನೇಜಮೆಂಟ್, ಸಮಾಜ ಕಾರ್ಯ, ರೂರಲ್ ಮ್ಯಾನೇಜ್ಮೆಂಟ್ ನಲ್ಲಿ ಪದವಿ ಹೊಂದಿರಬೇಕು ಹಾಗೂ ಸರ್ಕಾರಿ ಅಥವಾ ಸರ್ಕಾರೇತರ ಸಂಸ್ಥೆಗಳಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ಹುದ್ದೆ-ಸ್ಪೆಷಲಿಸ್ಟ್ ಇನ್ ಫೈನಾನ್ಸಿಯಲ್ ಲಿಟ್ರಸಿ ಅಂಡ್ ಅಕೌಂಟೆಂಟ್. ಹುದ್ದೆ ಸಂಖ್ಯೆ-01 ವಿದ್ಯಾರ್ಹತೆ:ಅರ್ಥಶಾಸ್ತ್ರ/ಬ್ಯಾಂಕಿಂಗ್/ಬಿ.ಕಾಂ ನಲ್ಲಿ ಪದವಿ, ಸ್ನಾತಕೋತ್ತರ ಪದವೀಧರರಿಗೆ ಮೊದಲ ಆದ್ಯತೆ ನೀಡಲಾಗುವುದು. ಆರ್ಥಿಕ ಸಾಕ್ಷರತೆ/ಆರ್ಥಿಕ ಸೇರ್ಪಡೆ ಕೇಂದ್ರಿತ ವಿಷಯಗಳಲ್ಲಿ ಸರ್ಕಾರಿ/ಸರ್ಕಾರೇತರ ಸಂಸ್ಥೆಗಳಲ್ಲಿ 3 ವರ್ಷಗಳ ಅನುಭವ ಹೊಂದಿರಬೇಕು.
ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
ಅರ್ಜಿಗಳನ್ನು ಪಡೆಯಲು ಹಾಗೂ ಮುಂತಾದ ವಿವರಗಳಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾ||, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ 080- 29787445 ಇಲ್ಲಿಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸ ಬಹುದಾಗಿದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಫೆಬ್ರವರಿ 22 ಸಂಜೆ 5.00 ಗಂಟೆಯೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಕಛೇರಿಗೆ ಸಲ್ಲಿಸಬಹುದಾಗಿದೆ.ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.