ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ:2200 ದಂಡ ಸಂಗ್ರಹ

Kalabandhu Editor
0 Min Read

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು ಸೆಕ್ಷನ್ 4 ರ ಅಡಿಯಲ್ಲಿ 14 ಪ್ರಕರಣಗಳನ್ನು ದಾಖಲಿಸಿ 2200 ರೂಗಳ ದಂಡವನ್ನು ಸಂಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ. ವಿದ್ಯಾರಾಣಿ ಪಿ.ಎಸ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರವಿ ಕುಮಾರ್, ಶಿವಕುಮಾರ್ ಸೇರಿದಂತೆ ಪೋಲಿಸ್ ಸಿಬ್ಬಂದಿ ಉಪಸ್ಥಿತರಿದ್ದರು.

Share this Article