ಸಮೃದ್ಧ ಭಾರತದ ಸಂಕಲ್ಪವೇ ವಿಕಸಿತ ಭಾರತದ ಸಂಕಲ್ಪ: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
ಕೇಂದ್ರ ಸರ್ಕಾರವ ಪ್ರತೀ ಮನೆಗೂ ಹತ್ತಾರು ಯೊಜನೆಗಳನ್ನು ನೀಡಿದೆ: ಎಂದು ಕೇಂದ್ರ ಸಚಿವ ಶ್ರೀ ನಾರಾಯಣ ಸ್ವಾಮಿ
ಪ್ರಧಾನಮಂತ್ರಿಯವರೊಂದಿಗೆ ಸಂವಾದದಲ್ಲಿ ಪಾಲ್ಗೊಂಡ ತುಮಕೂರಿನ ಮುಖೇಶ್
ಧಾರವಾಡ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಬಾಗಲಕೋಟೆ, ಚಾಮರಾಜನಗರ ಜಿಲ್ಲೆಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ
ಭಾರತ ದೇಶ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ. 2047 ರೊಳಗೆ ಅಭಿವೃದ್ಧಿ ಹೊಂದಿದ ದೇಶಗಳ ಸಾಲಿನಲ್ಲಿ ಭಾರತ ಸೇರ್ಪಡೆಯಾಗಲಿದೆ. ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಕಲ್ಪ ಮಾಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಶ್ರೀ ಪ್ರಹ್ಲಾದ್ ಜೋಶಿ ಹೇಳಿದರು.
ಧಾರವಾಡ ಜಿಲ್ಲೆಯ ವರೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಕೇಂದ್ರ ಸರ್ಕಾರದ ಯೋಜನೆಗಳ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
ಶಾಸಕರಾದ ಶ್ರೀ ಎಂ.ಆರ್. ಪಾಟೀಲ, ಶ್ರೀ ಮಹೇಶ ತೆಂಗಿನಕಾಯಿ, ಶ್ರೀ ಎಸ್.ವಿ.ಸಂಕನೂರ, ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾ ನಿರ್ದೇಶಕರಾದ ಶ್ರೀ ಎಸ್.ಜಿ. ರವೀಂದ್ರ ಮತ್ತಿತರರು ಬಾಗವಹಿಸಿದರು.ಸಾರ್ವಜನಿಕರಿಗೆ ಆರೋ ಆರೋಗ್ಯ ತಪಾಸಣೆ, ಡ್ರೋನ್ ಪ್ರಾತ್ಯಕ್ಷಿಕೆ ನಡೆಯಿತು.
ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಕೇಂದ್ರದ ನಾಗರಿಕ ವಿಮಾನಯಾನ ಮತ್ತು ಉಕ್ಕು ಖಾತೆ ಸಚಿವ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಭಾಗವಹಿಸಿದರು. ಈ ವೇಳೆ ಸಚಿವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಂವಾದ ಕಾರ್ಯಕ್ರಮದ ನೇರ ಪ್ರಸಾರವನ್ನು ಸಾರ್ವಜನಿಕರೊಂದಿಗೆ ವೀಕ್ಷಿಸಿದರು.
ಈ ವೇಳೆ ಮಾತನಾಡಿದ ಸಚಿವರು ಸಮೃದ್ಧ ಭಾರತದ ಸಂಕಲ್ಪ ಈ ವಿಕಸಿತ ಭಾರತದ ಸಂಕಲ್ಪವಾಗಿದೆ. ಈ ಹೊಸ ಯಾತ್ರೆಯು ವಿಕಾಸಶೀಲ ಭಾರತದ ಪರಿಕಲ್ಪನೆಗೆ ಇಂಬು ನೀಡಲಿದೆ. ಪ್ರಧಾನಿಯವರ ಕನಸನ್ನು ನನಸು ಮಾಡಬೇಕಾಗಿರುವುದು ನಮ್ಮೆಲ್ಲರ ಹೊಣೆಯಾಗಿದ್ದು, ಕೇಂದ್ರದ ಜನಪರ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಮಾತನಾಡಿ, ಕೇಂದ್ರ ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕೆಂದು ನಡೆಸುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯಲ್ಲಿ ಕೇಂದ್ರದ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದರು.
ಚಿತ್ರದುರ್ಗ: ಕೇಂದ್ರ ಸರಕಾರವು ಯಾವುದೇ ಒಂದು ಯೋಜನೆಗೆ ಸೀಮಿತವಾಗಿಲ್ಲ ಪ್ರತಿಯೊಬ್ಬ ಪ್ರಜೆಯನ್ನು ತಲುಪಲು, ಪ್ರತೀ ಮನೆಗೂ ಹತ್ತಾರು ಯೊಜನೆಗಳನ್ನು ನೀಡಿದೆ ಎಂದು ಕೇಂದ್ರ ಸಚಿವ ಶ್ರೀ ನಾರಾಯಣ ಸ್ವಾಮಿ ತಿಳಿಸಿದರು.
ಸಾಮಾಜಿಕ ಭದ್ರತಾ ಯೋಜನೆಗಳನ್ನು ಪ್ರತಿಯೊಬ್ಬ ಪಲಾನುಭವಿಗೆ ತಲುಪಿಸುವ ಕೆಲಸವನ್ನು ಯಾತ್ರೆಯ ಮೂಲಕ ಮಾಡಲಾಗುತಿದೆ ಎಂದರು.
ಉಡುಪಿ: ಉಡುಪಿ ಜಿಲ್ಲೆಯ ತೊಂಸೆ ಗ್ರಾಮ ಪಂಚಾಯತ್ ಆವರಣದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಉದ್ಘಾಟಿಸಿದರು. 
ಬಳಿಕ ಮಾತನಾಡಿದ ಅವರು, ಇತ್ತೀಚೆಗಷ್ಟೆ ಎರಡನೇ ಹಂತವಾಗಿ ಪ್ರತೀ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ನಡೆಯುತ್ತಿದೆ. ಪ್ರಧಾನಿ ಮೋದಿಯವರೇ ಸ್ವತಃ ಈ ಕಾರ್ಯಕ್ರಮದ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣದ ನೇರಪ್ರಸಾರ ವೀಕ್ಷಿಸಲಾಯಿತು.
ಪ್ರಧಾನಿಯವರೊಂದಿಗೆ ಸಂವಾದ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ವಿವಿಧೆಡೆಯ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ನೇರ ಸಂವಾದ ನಡೆಸಿದರು.
ತುಮಕೂರಿನ ಶ್ರೀ ಮುಖೇಶ ಅವರು ಪ್ರಧಾನಮಂತ್ರಿ ಅವರೊಂದಿಗೆ ಸಂವಾದದಲ್ಲಿ ಭಾಗವಹಿಸಿ ಮಾತನಾಡಿ, ಮುದ್ರಾ ಯೋಜನೆಯಡಿ ರೂ. 4.50 ಲಕ್ಷ ರೂ ಸಾಲ ಪಡೆದು ಕೆಲಸ ಪ್ರಾರಂಭಿಸಿದ್ದೇನೆ ಎಂದರು.
ದಾವಣಗೆರೆ: ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶಾದ್ಯಂತ ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ನಡೆಸಿದ ಸಂವಾದ ಕಾರ್ಯಕ್ರಮಕ್ಕೆ ದಾವಣಗೆರೆಯಲ್ಲಿ ಉತ್ತಮ ಸ್ಪಂದನೆ ದೊರಕಿತು.
ಸಂಸದ ಶ್ರೀ. ಜಿ. ಎಂ. ಸಿದ್ದೇಶ್ವರ ಹಾಗೂ ಶಾಸಕ ಶ್ರೀ. ಹರೀಶ್ ಬಿ. ಪಿ ಅವರು ಪ್ರಧಾನಮಂತ್ರಿ ಅವರ ಕಾರ್ಯಕ್ರಮದ ನೇರ ಪ್ರಸಾರವನ್ನು ಜಿಲ್ಲೆಯ ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮದಲ್ಲಿ ಸಾರ್ವಜನಿಕರೊಂದಿಗೆ ವೀಕ್ಷಿಸಿದರು.
ಬಳಿಕ ಮಾತನಾಡಿದ ಸಂಸದ ಶ್ರೀ. ಜಿ.ಎಂ.ಸಿದ್ದೇಶ್ವರ, ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ಜನಕಲ್ಯಾಣ ಕಾರ್ಯಕ್ರಮಗಳಿಂದ ದೇಶದ ಅಭಿವೃದ್ಧಿಯ ಚಿತ್ರಣ ಬದಲಾಗಿದೆ, ಯೋಜನೆಗಳ ವ್ಯಾಪ್ತಿಯಿಂದ ಹೊರಗುಳಿದವರನ್ನು ಫಲಾನುಭವಿಗಳನ್ನಾಗಿಸುವುದು ವಿಕಸಿತ ಸಂಕಲ್ಪ ಯಾತ್ರೆಯ ಉದ್ದೇಶ ಎಂದು ತಿಳಿಸಿದರು.
ಹರಿಹರ ಶಾಸಕ ಬಿ.ಪಿ.ಹರೀಶ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ವಿಜಯಪುರ: ಭಾರತ ಸರ್ಕಾರವು ಜಾರಿಗೆ ತಂದಿರುವ ಹಲವಾರು ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸಮಗ್ರ ಮಾಹಿತಿ ನೀಡುವ ದಿಸೆಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಇಂದು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಜೈನಾಪುರ ಗ್ರಾಮದಲ್ಲಿ ಜರುಗಿತು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಧ್ವನಿಮುದ್ರಿತ ಆಡಿಯೋ ಮತ್ತು ವಿಡಿಯೋ ಪ್ರದರ್ಶನ ನಡೆಯಿತು.
ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೆ ತಲುಪಿಸುವ “ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಬಾಗಲಕೋಟೆ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ.
ಇಂದು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಗ್ರಾಮಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಯಶಸ್ವಿಯಾಗಿ ಜರುಗಿತು.
ಗದಗ: ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸುವ ’ವಿಕಸಿತ ಭಾರತ ಸಂಕಲ್ಪ ಯಾತ್ರೆ ಗದಗ ಜಿಲ್ಲೆಯ ಹಂದಿಗೋಳ ಮತ್ತು ಬೆಳಹೋಡ ಗ್ರಾಮಗಳಲ್ಲಿ ಶನಿವಾರ ಯಶಸ್ವಿಯಾಗಿ ಜರುಗಿತು.
ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಫಲಾಭವಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದವನ್ನು ವಿಕಸಿತ ಭಾರತ ಸಂಕಲ್ಪ ಯಾತ್ರೆ ವಾಹನದ ಎಲ್ ಇ ಡಿ ಪರದೆಯ ಮೇಲೆ ಸಾರ್ವಜನಿಕರು ವೀಕ್ಷಿಸಿದರು.
ಹುಲಕೋಟಿ ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ಮತ್ತು ಆರ್ ಸಿ ಎಫ್ ಅಧಿಕಾರಿಗಳು ಡ್ರೋಣ್ ಮೂಲಕ ಕೀಟನಾಶಕ ಸಿಂಪರಣೆಯ ಪ್ರಾತ್ಯಕ್ಷಿಕೆ ನೀಡಿದರು.
ಚಾಮರಾಜನಗರ: ಅರ್ಹ ಭಾರತೀಯರೆಲ್ಲರಿಗೂ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಪ್ರಯೋಜನ ದೊರೆಯುವಂತೆ ಮಾಡಲು ನೆರವಾಗುವ ಕೇಂದ್ರ ಸರ್ಕಾರದ ಮಹತ್ವದ ಜನೋಪಯೋಗಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವಲ್ಲಿ ಕೈಗೊಂಡಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಪ್ರಚಾರ ಕಾರ್ಯಕ್ರಮ ಗಡಿ ಜಿಲ್ಲೆ ಚಾಮರಾಜನಗರದ ಹರದನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿಂದು ನಡೆಯಿತು.
ಹರದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ರೈತರಿಗೆ ವರದಾನವಾಗಿರುವ ಕೃಷಿ ಚಟುವಟಿಕೆಗಳ ರಕ್ಷಣೆಗೆ ಮಣ್ಣು ಪರೀಕ್ಷೆ, ಬೆಳೆಗಳ ರಕ್ಷಣೆಗೆ ನೆರವಾಗುವ ಡ್ರೋಣ್ ಮೂಲಕ ಔಷಧ ಸಿಂಪರಣೆ ಕುರಿತು ಮಾಹಿತಿ ಪಡೆದರು.