ಡ್ರೋಣ್ ಮೂಲಕ ಕೀಟನಾಶಕ ಸಿಂಪರಣೆ ಮಾಡುವ ಪ್ರಾತ್ಯಕ್ಷಿಕೆ

Kalabandhu Editor
4 Min Read

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಧ್ವನಿಮುದ್ರಿತ ಸಂದೇಶ ಬಿತ್ತರಿಸಲಾಯಿತು

 

ಡ್ರೋಣ್ ಮೂಲಕ ಕೀಟನಾಶಕ ಸಿಂಪರಣೆ ಮಾಡುವ ಪ್ರಾತ್ಯಕ್ಷಿಕೆ ಜರುಗಿತು

 

ಮಣ್ಣು ಸಂರಕ್ಷಣೆ ಸುರಕ್ಷಿತ ಕೃಷಿ ವಿಧಾನಗಳ ಕುರಿತು ರೈತರಿಗೆ ಪ್ರಾತ್ಯಕ್ಷತೆ ನೀಡಲಾಯಿತು.

 

ಚಿಕ್ಕಮಗಳೂರು, ದಾವಣಗೆರೆ , ಶಿವಮೊಗ್ಗ,  ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ,  ಗದಗ, ವಿಜಯಪುರ ಗಳಲ್ಲಿ ಯಶಸ್ವಿಯಾದ ವಿಕಸಿತ ಭಾರತ ಸಂಕಲ್ಪ ಯಾತ್ರೆ

ವಿಜಯಪುರ ಜಿಲ್ಲೆ: ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸುವ “ವಿಕಸಿತ ಭಾರತ ಸಂಕಲ್ಪ ಯಾತ್ರಾ ಇಂದು ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಯಲಗೋಡು ಮತ್ತು ಕೋರವಾರ ಗ್ರಾಮದಲ್ಲಿ ಹಾಗೂ ಕೋಲ್ಹಾರ ತಾಲೂಕಿನ  ತೆಲಗಿ ಹಾಗೂ ಮಸೂತಿ ಗ್ರಾಮದಲ್ಲಿ ನಡೆಯಿತು.

ತೆಲಗಿ ಗ್ರಾಮದಲ್ಲಿ ಜರುಗಿದ ಅಭಿಯಾನದ ಆರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಧ್ವನಿಮುದ್ರಿತ ಸಂದೇಶ ಬಿತ್ತರವಾಯಿತು.  ಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮುಂದುವರಿದಿದ್ದು, ಇಂದು ಹೂವಿನಹಡಗಲಿ ತಾಲೂಕು ಹಿರೇಮಲ್ಲನಕೆರೆ ಗ್ರಾಮದಲ್ಲಿ ಜರುಗಿತು.  ಕಾರ್ಯಕ್ರಮದಲ್ಲಿ ಎಸ್ ಬಿ ಐ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕರಾದ ಬಾಲಕೃಷ್ಣ ಭಟ್ ಮಾತನಾಡಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಬಗ್ಗೆ ಮಾಹಿತಿ ನೀಡಿದರು.

ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರಾದ ಪಿ ಬಿ ಅಸುಂಡಿಯವರು ಪ್ರಧಾನಮಂತ್ರಿ ಜೀವನ್ ಜ್ಯೋತಿ ಯೋಜನೆ ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ ಮತ್ತು ಅಟಲ್ ಪಿಂಚಣಿ ಯೋಜನೆ ಕುರಿತು ಗ್ರಾಮಸ್ಥರಿಗೆ  ಮಾಹಿತಿ ನೀಡಿದರು.
ವಿಜಯನಗರ ಜಿಲ್ಲೆಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮುಂದುವರಿದಿದ್ದು, ಇಂದು ಹೂವಿನಹಡಗಲಿ ತಾಲೂಕು ಹಿರೇಮಲ್ಲನಕೆರೆ ಗ್ರಾಮದಲ್ಲಿ ಜರುಗಿತು.  ಕಾರ್ಯಕ್ರಮದಲ್ಲಿ ಎಸ್ ಬಿ ಐ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕರಾದ ಬಾಲಕೃಷ್ಣ ಭಟ್ ಮಾತನಾಡಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಬಗ್ಗೆ ಮಾಹಿತಿ ನೀಡಿದರು.
ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕರಾದ ಪಿ ಬಿ ಅಸುಂಡಿಯವರು ಪ್ರಧಾನಮಂತ್ರಿ ಜೀವನ್ ಜ್ಯೋತಿ ಯೋಜನೆ ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ ಮತ್ತು ಅಟಲ್ ಪಿಂಚಣಿ ಯೋಜನೆ ಕುರಿತು ಗ್ರಾಮಸ್ಥರಿಗೆ  ಮಾಹಿತಿ ನೀಡಿದರು.
ಗದಗ : ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ವಿಕಸಿತ ಭಾರತ ಸಂಕಲ್ಪ ಯಾತ್ರೆ ಗದಗ ಜಿಲ್ಲೆಯ  ಶಿರಹಟ್ಟಿ  ತಾಲೂಕಿನ ಗೊಜನೂರು ಮತ್ತು ರಾಮಗಿರಿ ಗ್ರಾಮಗಳಲ್ಲಿ ಯಶಸ್ವಿಯಾಗಿ ಜರುಗಿತು.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಲಕ್ಷ್ಮೇಶ್ವರ ಶಾಖೆಯ ವ್ಯವಸ್ಥಾಪಕ ಚಂದ್ರಶೇಖರ್ ಪಾಟೀಲ್ ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ,ಕೇಂದ್ರ ಸರಕಾರ ಜಾರಿಗೊಳಿಸಿದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರಿಗೆ ತಿಳಿಸಿದರು.
ದೇಶದ ಪ್ರತಿಯೊಬ್ಬರು ಅಭಿವೃದ್ಧಿ ಹೊಂದುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲ ಉದ್ದೇಶವಾಗಿದೆ ಎಂದು ಹುಲಕೋಟಿ ಗ್ರಾಮದ ಹಿರಿಯ ನಾಗರಿಕರಾದ ಡಿ ಐ ಮುಂಡರಗಿ ಬುಧವಾರ ತಿಳಿಸಿದರು. ಗದಗ ತಾಲೂಕಿನ ಹುಲಕೋಟಿ ಮತ್ತು ಚಿಂಚಲಿ ಗ್ರಾಮದಲ್ಲಿ ಜರುಗಿದ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಚಾಮರಾಜನಗರ, ಮೈಸೂರು, ಚಿಕ್ಕಬಳ್ಳಾಪುರ ಜಿಲ್ಲೆ: ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ರಾಘವಪುರ ಹಾಗೂ ಬೇಗೂರು ಗ್ರಾಮ ಪಂಚಾಯತಿಗೆ ತೆರಳಿತು. ನೆರೆದಿದ್ದ ಗ್ರಾಮದ ಜನರಿಗೆ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳ ಮಾಹಿತಿಯನ್ನು ನೀಡಲಾಯಿತು.
ಜನರು ಹೆಚ್ಚಿನ ಆಸಕ್ತಿಯಿಂದ ಕೇಂದ್ರ ಸರ್ಕಾರ ನೀಡುತ್ತಿರುವ ಸವಲತ್ತುಗಳ ಮಾಹಿತಿಯನ್ನು ಪಡೆದುಕೊಂಡರು. ರೈತರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯೋಜನೆಗಳ ಮಾಹಿತಿ ಬಿತ್ತರಿಸುವ ವೀಡಿಯೋ ವೀಕ್ಷಿಸಿದರು.
ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಕ್ಯಾತನಹಳ್ಳಿ ಹಾಗೂ ಕಂಚನಹಳ್ಳಿ ಗ್ರಾಮಪಂಚಾಯಿತಿಯಲ್ಲಿ ತೆರಳಿ ಕಾರ್ಯಕ್ರಮ ನಡೆಸಿತು.  ಕೇಂದ್ರ ಸರ್ಕಾರದ ಯೋಜನೆಗಳು ಗ್ರಾಮಸ್ಥರಿಗೆ ಯಾವ ರೀತಿ ಪ್ರಯೋಜನಕಾರಿ ಎಂದು ತಿಳಿಸಲಾಯ್ತು.
ಒಟ್ಟು 3 ವಾಹನಗಳು ಜಿಲ್ಲೆಯ ಹಲವು ಗ್ರಾಮಪಂಚಾಯಿತಿಗಳಲ್ಲಿ ಪ್ರತಿನಿತ್ಯ ಸಂಚರಿಸುತ್ತಿವೆ. ಪಿರಿಯಾಪಟ್ಟಣ ತಾಲೂಕಿನ ಹಿತ್ತನೆಹೆಬ್ಬಾಗಿಲು ಹಾಗೂ ರಮಾನಾಥತುಂಗಾ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಿತು.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುರುಬರಹಳ್ಳಿ ಹಾಗೂ ಕಾದಲವೇಣಿ ಗ್ರಾಮಪಂಚಾಯತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ತೆರಳಿತು. ಕೇಂದ್ರ ಸರಕಾರವು ವಿವಿಧ ಇಲಾಖೆಗಳ ಮುಖಾಂತರ ಯಾವೆಲ್ಲಾ ಯೋಜನೆಗಳನ್ನು ಸಾರ್ವಜನಿಕರಿಗೆ ನೀಡುತ್ತಿದೆ ಎಂಬ ವಿವರವನ್ನು ವೀಡಿಯೋ ಮೂಲಕ ತಿಳಿಸಲಾಯ್ತು. ಶಿಡ್ಲಘಟ್ಟ ತಾಲೂಕಿನ ಗಂಜಿಗುಂಟೆ ಹಾಗೂ ತಲಕಾಯಲಬೆಟ್ಟ ಗ್ರಾಮಪಂಚಾಯಿತಿ ರೈತರಿಗೆ ಅನುಕೂಲವಾಗುವ ಮಣ್ಣು ಸಂರಕ್ಷಣೆ ಸುರಕ್ಷಿತ ಕೃಷಿ ವಿಧಾನಗಳ ಕುರಿತು ಪ್ರಾತ್ಯಕ್ಷಿಕತೆ ನೀಡಲಾಯ್ತು.
ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳ ಗ್ರಾಮೀಣ ಭಾಗಗಳಲ್ಲಿ ಕೇಂದ್ರ ಸರ್ಕಾರದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಬಿರುಸಿನಿಂದ ಸಾಗುತ್ತಿದೆ. ಚಿಕ್ಕಮಗಳೂರಿನ ಲಿಂಗದಹಳ್ಳಿ ಗ್ರಾಮದಲ್ಲಿ ಯಾತ್ರೆಯ ಅಂಗವಾಗಿ ಇಂದು ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ. ಪ್ರದೀಪ್ ಕುಮಾರ್ ಅವರು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಚಿಕ್ಕಮಗಳೂರಿನ ಲಿಂಗದಹಳ್ಳಿಯಲ್ಲಿ  ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು. ಅಲ್ಲದೆ, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಪ್ರತಿಜ್ಞೆಯನ್ನು ಸಾರ್ವಜನಿಕರಿಗೆ ಬೋಧಿಸಲಾಯಿತು.  ದಾವಣಗೆರೆಯ ಜಿಗಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಉತ್ತಮ ಜನಸ್ಪಂದನೆ ದೊರಕಿತು.

 

Share this Article