2047 ರ ವೇಳೆಗೆ ಪ್ರಪಂಚದಲ್ಲಿ ಭಾರತ ವಿಕಸಿತ ಹೊಂದಿದ ರಾಷ್ಟ್ರವಾಗಿ ಮೊದಲ ಸ್ಥಾನಕ್ಕೆ ಬರಲಿದೆ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Kalabandhu Editor
2 Min Read

 

ಕೇಂದ್ರ ಸರ್ಕಾರದ ಜನೌಷಧ ಕೇಂದ್ರಗಳಲ್ಲಿ ಕಡಿಮೆ ದರದಲ್ಲಿ ಔಷಧಗಳು ಲಭ್ಯವಾಗುತ್ತಿವೆ.

ಕಿಸಾನ್ ಕ್ರೆಡಿಟ್ ಕಾರ್ಡ್ ನಿಂದಾಗಿ ದೇಶದ ರೈತರಿಗೆ ಆರ್ಥಿಕ ಅನುಕೂಲವಾಗಿದೆ
ಪ್ರಕಟಣಾ ದಿನಾಂಕ: 07 JAN 2024 7:39PM by PIB Bengaluru
ಚಿಕ್ಕಮಗಳೂರು: ಕರ್ತಿಕೆರೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ಯಮಗಳ ಖಾತೆ ಸಹಾಯಕ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.

ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಅಭಿಪ್ರಾಯ ಪಡೆಯುವುದು ಹಾಗೂ ಯೋಜನೆಗಳ ವ್ಯಾಪ್ತಿಯಿಂದ ಹೊರಗುಳಿದವರನ್ನು ಗುರುತಿಸಿ ಅವರು ಪ್ರಯೋಜನ ಪಡೆಯುವಂತೆ ಮಾಡುವುದು ವಿಕಸಿತ ಯಾತ್ರೆಯ ಉದ್ದೇಶ ಎಂದು ಸಚಿವರು ತಿಳಿಸಿದರು.

ಕೇಂದ್ರ ಸರ್ಕಾರದ ಯೋಜನೆಗಳು ಎಲ್ಲಾ ವರ್ಗದ ಜನರೀಗೆ ಶೇಕಡ 100% ರಷ್ಟು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದೆ ಎಂದು ಕೇಂದ್ರ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಚಿಕ್ಕಮಗಳೂರು: ಜಿಲ್ಲೆಯ ಕರ್ತಿಕೆರೆ ಗ್ರಾಮದಲ್ಲಿ ಇಂದು ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇನ್ನು 5 ವರ್ಷಗಳಲ್ಲಿ ಎಲ್ಲಾ ಯೋಜನೆಗಳು ಜನರನ್ನು ತಲುಪಿಸುವು ಕೇಂದ್ರದ ಗುರಿಯಾಗಿದೆ. 2047 ರ ವೇಳೆಗೆ ಪ್ರಪಂಚದಲ್ಲಿ ಭಾರತ ವಿಕಸಿತ ಹೊಂದಿದ ರಾಷ್ಟ್ರವಾಗಿ ಮೊದಲ ಸ್ಥಾನಕ್ಕೆ ಬರಲಿದೆ ಆ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಕೇಂದ್ರ ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಬೆಂಗಳೂರು ನಗರ: ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ರೂಪಿಸಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಬೆಂಗಳೂರು ನಗರದ ಮಲ್ಲೇಶ್ವರಂ ಬಳಿ ರಥ ಯಾತ್ರೆ ಆಗಮಿಸಿ ಜನರಿಗೆ ಕೇಂದ್ರ ಸರ್ಕಾ‍ರ ಯೋಜನೆಗಳ ಕುರಿತು ಪ್ರಚಾರ ಕೈಗೊಳ್ಳಲಾಯಿತು.

ಸರ್ಕಾರದ ಯೋಜನೆಗಳು ತಲುಪದೇ ಇದ್ದವರಿಗೆ ತಲುಪಿಸುವುದು, ಅವಶ್ಯಕತೆ ಇದ್ದವರಿಗೆ ಸರ್ಕಾರದ ಸೇವೆಗಳನ್ನ ಅವರ ಮನೆ ಬಾಗಿಲಿಗೆ ಒದಗಿಸುವುದು, ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಮಾಹಿತಿ ಕೊರತೆಯಿಂದ ಆಗುವ ತೊಡಕುಗಳನ್ನು ನಿವಾರಿಸುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮುಖ್ಯ ಉದ್ದೇಶವಾದೆ ಎಂದು ಕೆನರಾ ಬ್ಯಾಂಕ್ ಅಧಿಕಾರಿ ಸಭೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು

Share this Article