ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ಸರ್ವ ಸದಸ್ಯರ ಸಭೆ ದಿನಾಂಕ 5-1-2024ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮಂಗಳೂರು ಆಡ್ಯಾರ್‌ನ ಸಹ್ಯಾದ್ರಿ ಕಾಲೇಜ್ ಆಪ್ ಇಂಜಿನೀಯರಿಂಗ್ ಸಭಾಂಗಣದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಗೆ ಮುನ್ನ ಇದೇ ಸಭಾಂಗಣದಲ್ಲಿ ಕೆಯುಡಬ್ಲೂಜೆ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯೂ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ 3 ದಿನ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ ವತಿಯಿಂದ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೇಟ್ ಕ್ರೀಡಾಕೂಟ 5.102024 ರಿಂದ 7.1.2024 ತನಕ 3 ದಿನಗಳ ಕಾಲ ಮಂಗಳೂರು ಆಡ್ಯಾರ್‌ನ ಸಹ್ಯಾದ್ರಿ ಇಂಜಿನೀಯರಿಂಗ್ ಕಾಲೇಜ್ ಆಟದ ಮೈದಾನದಲ್ಲಿ ನಡೆಯಲಿದೆ. ಡಿ.20ರೊಳಗೆ ಭಾಗವಹಿಸುವ ತಂಡಗಳು ನೋಂದಣಿ ಮಾಡಿಕೊಳ್ಳಬೇಕು ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂಡಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.